ಅದಮ್ಯ ಚೇತನದ 385ನೇ ಹಸಿರು ಭಾನುವಾರ ಕಾರ್ಯಕ್ರಮವು ನಿನ್ನೆ ಜಲ ಭವನ ರಸ್ತೆ, ಎನ್.ಎ.ಎಲ್. ಲೇಔಟ್, ಜಯನಗರದ ಆವರಣದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಶ್ರೀ ಸಿ.ಕೆ ರಾಮಮೂರ್ತಿ, ಅದಮ್ಯ ಚೇನನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಸ್ವಯಂ ಸೇವಕರು ಭಾಗವಹಿಸಿದ್ದರು.