ಅದಮ್ಯ ಚೇತನದ 398 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿ. 13-08-2023 ರಂದು ಕೆಂಗೇರಿ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನಮಠದ ಆವರಣದಲ್ಲಿ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮಿಜೀ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. 50 ನಾನಾ ಜಾತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಅದಮ್ಯ ಚೇತನದ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ , ಕಿರಿಯ ಸ್ವಾಮೀಜಿಗಳಾದ ಶ್ರೀ ರಮಣಾನಂದನಾಥ ಸ್ವಾಮಿಜೀ, ಜಪಾನಿನ ಟೋರು ಹೊಮ್ಮಾ, ಕೈಟಾ ಹೊಮ್ಮಾ , ಹಾಗೂ ಸಂಸ್ಥೆಯ ಸ್ವಯಂ ಸೇವಾ ಕಾರ್ಯಕರ್ತರು ಮೊದಲಾದವರು ಭಾಗಿಯಾಗಿದ್ದರು.