ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಅದಮ್ಯ ಚೇತನ ಸಂಸ್ಥೆಯಿಂದ ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಬಳಿಯ ಅನಂತವನ ಆವರಣದಲ್ಲಿ ಅ. 2ರಂದು ಸೋಮವಾರ ಸ್ವಚ್ಛತೆಯ ಶ್ರಮದಾನ ಸೇವೆಯನ್ನು ಕೈಗೊಳ್ಳಲಾಯಿತು. ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.