Adamya Green #397
ಅದಮ್ಯ ಚೇತನ, ವಾಸವಿ ಸೇವಾ ಸಮಿತಿ ಹಾಗೂ ಸಮಾನ ಮನಸ್ಕ ಗೆಳೆಯರ ಬಳಗದ ಸಹಯೋಗದೊಂದಿಗೆ ದಿ. 06-08-2023 ರಂದು 397 ನೇ ಹಸಿರು ಭಾನುವಾರ ಕಾರ್ಯಕ್ರಮವು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೋಲಾರದ ಅಂತರಗಂಗೆ ಪುಣ್ಯಕ್ಷೇತ್ರದಲ್ಲಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. ನಾನಾ ಜಾತಿಯ 60 ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ವಾಸವಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀ ಲಯನ್ ಶಿವ ಶೇಖರ್, ಸಮಾನ ಮನಸ್ಕ ಗೆಳೆಯರ ಬಳಗದ ಸದಸ್ಯರು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅದಮ್ಯ ಚೇತನ ಸಂಸ್ಥೆಯ ಸ್ವಯಂ ಸೇವಾ ಕಾರ್ಯಕರ್ತರು ಮೊದಲಾದವರು ಭಾಗಿಯಾಗಿದ್ದರು.