ಅದಮ್ಯ ಚೇತನದ 457 ನೇ ಹಸಿರು ಭಾನುವಾರ ಕಾರ್ಯಕ್ರಮವು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿರುವ ಗಾಂಧಿ ಸಂಶೋಧನಾ ಕೇಂದ್ರದ ಬಳಿ ಬಯೋ-ಪಾರ್ಕ್ ಕ್ಯಾಂಪಸ್ ನ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. 10 ಗಿಡಗಳನ್ನು ನೆಟ್ಟು, ಅಲ್ಲಿಯ ಕಳೆ ಕಿತ್ತು ಸ್ವಚ್ಛ ಮಾಡಲಾಯಿತು. ಅಲ್ಲದೆ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತ್ ಕುಮಾರ್ ಅವರು ಇಂಟರ್ನ್‌ಶಿಪ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.