Adamya Green #459
ಸುವರ್ಣಭಾರತಿ – ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಅವರುಗಳ 50 ನೇ ವರ್ಷದ ಸನ್ಯಾಸ ದೀಕ್ಷೆಯ ನಿಮಿತ್ತ, ಅದಮ್ಯ ಚೇತನದ 459 ನೇ ಹಸಿರು ಭಾನುವಾರ ಕಾರ್ಯಕ್ರಮವು 2024ರ ಅಕ್ಟೊಬರ್ 13 ರಂದು ಬೆಂಗಳೂರಿನ ಶಂಕರಪುರದ ಶಂಕರ ಮಠದಲ್ಲಿ ಯಶಸ್ವಿಯಾಗಿ ಜರುಗಿತು.
ಅಲ್ಲಿನ ಆವರಣವನ್ನು ಸ್ವಚ್ಛಗೊಳಿಸಿ, ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು ಹಾಗೂ ಗಿಡಗಳಿಗೆ ನೀರುಣಿಸಲಾಯಿತು.
ಈ ಸಂದರ್ಭದಲ್ಲಿ ಅದಮ್ಯಚೇತನದ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.