Adamya Chetana

Adamya Green #465

ಅದಮ್ಯ ಚೇತನ ಸಂಸ್ಥೆಯ “ಹಸಿರು ಭಾನುವಾರ”ದ 465ನೇ ಕಾರ್ಯಕ್ರವು 2024ರ ನವೆಂಬರ್ 24 ರಂದು ಬೆಂಗಳೂರಿನ ಚಾಮರಾಜಪೇಟೆಯ ಕೃಷ್ಣ ರಾಜೇಂದ್ರ ರಸ್ತೆಯಲ್ಲಿರುವ ಫೋರ್ಟ್ ಹೈಸ್ಕೂಲ್ ಆವರಣದಲ್ಲಿ ಯಶಸ್ವಿಯಾಗಿ ಜರಗಿತು.
ಶಾಲಾ ಆವರಣದ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿ ಸ್ವಚ್ಛಗೊಳಿಸುವುದರೊಂದಿಗೆ, ವಿವಿಧ ಜಾತಿಯ ಗಿಡಗಳನ್ನು ನೆಟ್ಟು, ಅವುಗಳಿಗೆ ನೀರು ಹಾಕುವ ಕಾರ್ಯಾಚರಣೆ ನಡೆಯಿತು. ವಿದ್ಯಾರ್ಥಿಗಳು ಸೇರಿದಂತೆ ಸ್ವಯಂ ಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಭಾಗಿವಹಿಸಿದ್ದರು.
ಈ ಸಂದರ್ಭದಲ್ಲಿ, ಅದಮ್ಯಚೇತನದ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು, ಪರಿಸರ ಸ್ನೇಹಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.