Adamya Green #471
2025 ಜನವರಿ 05 ರಂದು, ಅದಮ್ಯ ಚೇತನದ 471ನೇ ಹಸಿರು ಭಾನುವಾರ ಕಾರ್ಯಕ್ರಮವು ರಾಜಾಜಿ ನಗರ ಜಂಗಮಮಠದ ಸಿದ್ಧಗಂಗಾ ಪ್ರೌಢಶಾಲೆಯ ಆವರಣದಲ್ಲಿ ಯಶಸ್ವಿಯಾಗಿ ಜರಗಿತು.
ಎಂದಿನಂತೆ ಅಲ್ಲಿಯ ಸ್ಥಳವನ್ನು ಸ್ವಚ್ಛ ಮಾಡಿ, ವಿವಿಧ ಜಾತಿಯ ಗಿಡಗಳನ್ನು ನೆಟ್ಟು, ಪರಿಸರ ಸ್ವಚ್ಛತೆ ಮತ್ತು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯತ್ತ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಯಿತು. ಹಸಿರು ಪರಿಸರದ ಪ್ರಾಮುಖ್ಯತೆಯನ್ನು ಒತ್ತಿಹೇಳುವ ಹಸಿರು ಭಾನುವಾರ ಕಾರ್ಯಕ್ರಮವು ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಲು ಸದಾ ಪ್ರೇರಣೆಯಾಗಲಿ.
ಈ ಸಂದರ್ಭದಲ್ಲಿ, ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು, ಪರಿಸರ ಸ್ನೇಹಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.