Adamya Green #474
76ನೇ ಗಣರಾಜ್ಯೋತ್ಸವದ ಪ್ರಯುಕ್ತ ಅದಮ್ಯ ಚೇತನದ 474ನೇ ‘ಹಸಿರು ಭಾನುವಾರ’ ಕಾರ್ಯಕ್ರಮವು ಅಲುಮ್ನಿ ಅಸೋಸಿಯೇಷನ್ ಆಫ್ ಯು ವಿ ಸಿ ಇ, ಸಿಲ್ವರ್ ಜುಬಿಲಿ ಬಿಲ್ಡಿಂಗ್, ಪೋಸ್ಟ್ ಆಫೀಸ್ ರಸ್ತೆ, ಕೆ. ಆರ್. ಸರ್ಕಲ್, ಸರ್ ಎಂ. ವಿಶೇಶ್ವರಯ್ಯ ಮೆಟ್ರೋ ನಿಲ್ದಾಣದ ಹತ್ತಿರ, ಬೆಂಗಳೂರು ಇಲ್ಲಿ ಸಂಭ್ರಮದಿಂದ ಯಶಸ್ವಿಯಾಗಿ ಜರಗಿತು.
ಅದಮ್ಯಚೇತನದ ಅಧ್ಯಕ್ಷರಾದ ಡಾ. ತೇಜಸ್ವಿನಿ ಅನಂತ್ ಕುಮಾರ್ ಅವರು ಮಾತನಾಡಿ, ಪರಿಸರದ ಹಿತಕ್ಕಾಗಿ ‘ಹಸಿರು ಭಾನುವಾರ’ ಕಾರ್ಯಕ್ರಮವು ಒಂದು ಮಾದರಿ ಕಾರ್ಯಕ್ರಮವಾಗಿದೆ. ಅಲ್ಲದೆ, ಪರಿಸರ ಸಂರಕ್ಷಣೆ, ಶುದ್ಧ ಹಸಿರು ಪರಿಸರವನ್ನು ಉಳಿಸಿಕೊಳ್ಳುವುದು ಹಾಗೂ ಸಾಮಾಜಿಕ ಜಾಗೃತಿಯನ್ನು ಸೃಷ್ಟಿಸುವುದು ಈ ವಿಶೇಷ ಕಾರ್ಯಕ್ರಮದ ಉದ್ದೇಶ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು, ಪರಿಸರ ಸ್ನೇಹಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.