Adamya Green #478
ಅದಮ್ಯ ಚೇತನದ 478ನೇ ‘ಹಸಿರು ಭಾನುವಾರ’ ಕಾರ್ಯಕ್ರಮವು ಸರ್ಕಾರಿ ಕನ್ನಡ – ಆಂಗ್ಲಪ್ರಾಥಮಿಕ ಶಾಲೆ, ಚಾಮರಾಜಪೇಟೆ, ಬೆಂಗಳೂರು ಇಲ್ಲಿ ಯಶಸ್ವಿಯಾಗಿ ಜರಗಿತು.
ಹಸಿರು ಭಾನುವಾರದಂತಹ ಪರಿಸರ ಸ್ನೇಹಿ ಕಾರ್ಯಕ್ರಮಗಳ ಯಶಸ್ಸು, ಜನಸಾಮಾನ್ಯರ ಭಾಗವಹಿಸುವಿಕೆಯಲ್ಲಿದೆ. ಪ್ರತಿಯೊಬ್ಬರೂ ಕೈಜೋಡಿಸಿದರೆ ಮಾತ್ರ ಇದು ಯಶಸ್ವಿಯಾಗಲಿದೆ.
ಪರಿಸರ ಸಂರಕ್ಷಣೆ, ಶುದ್ಧ ಹಸಿರು ಪರಿಸರವನ್ನು ಉಳಿಸಿಕೊಳ್ಳುವುದು ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಈ ಕಾರ್ಯಕ್ರಮದಲ್ಲಿ ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು, ಪರಿಸರ ಸ್ನೇಹಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.