ಅದಮ್ಯ ಚೇತನದ 484ನೇ ಹಸಿರು ಭಾನುವಾರ ಕಾರ್ಯಕ್ರಮವು ಬೆಂಗಳೂರಿನ ಲಕ್ಷ್ಮಿಪುರಂ ಮುಖ್ಯ ರಸ್ತೆಯಲ್ಲಿರುವ ಗಣೇಶ ಉದ್ಯಾನ ಆವರಣದಲ್ಲಿ ಯಶಸ್ವಿಯಾಗಿ ನೆರೆವೇರಿತು. ಪರಿಸರ ಸಂರಕ್ಷಣೆ ಮತ್ತು ಮುಂದಿನ ಪೀಳಿಗೆಗೆ ಹಸಿರು ಭವಿಷ್ಯವನ್ನು ನೀಡುವ ಮಹತ್ವದ ಉದ್ದೇಶದಿಂದ ಅದಮ್ಯ ಚೇತನವು ಹಸಿರು ಭಾನುವಾರದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.
ಈ ಸಂದರ್ಭದಲ್ಲಿ, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು, ಪರಿಸರ ಸ್ನೇಹಿಗಳು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.