Adamya Chetana

Adamya Green #493

ಅದಮ್ಯ ಚೇತನದ 493ನೇ ಹಸಿರು ಭಾನುವಾರ ಕಾರ್ಯಕ್ರಮವು 2025ರ ಜೂನ್ 8 ರಂದು, ಬೆಂಗಳೂರಿನ ಉತ್ತರಹಳ್ಳಿ-ಸುಬ್ರಹ್ಮಣ್ಯಪುರ ರಸ್ತೆಯ ಸುಬ್ರಹ್ಮಣ್ಯಪುರ ಕೆರೆ ಆವರಣದಲ್ಲಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್‌ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು.

ಪರಿಸರ ಸಂರಕ್ಷಣೆಯ ಮಹತ್ವವನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಲ್ಲಿ ಪರಿಸರ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದಾಗಿ, ಹಸಿರು ಭಾನುವಾರವು ಪ್ರತಿವಾರವೂ ನಿಸ್ವಾರ್ಥ ಸೇವೆಯ ಮೂಲಕ ಅನೇಕರ ಗಮನ ಸೆಳೆಯುತ್ತಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಕರು, ಪರಿಸರ ಪ್ರೇಮಿಗಳು ಮತ್ತು ಸ್ಥಳೀಯ ನಾಗರಿಕರು ಭಾಗವಹಿಸಿದ್ದರು.