Adamya Chetana

Adamya Green #499

ಅದಮ್ಯ ಚೇತನದ 499ನೇ ಹಸಿರು ಭಾನುವಾರ – ಪರಿಸರದತ್ತ ಇನ್ನೊಂದು ಹೆಜ್ಜೆ

2025ರ ಜುಲೈ 20ರಂದು ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯ ಅನಂತವನ ಆವರಣದಲ್ಲಿ ಅದಮ್ಯ ಚೇತನ ಸಂಸ್ಥೆಯ 499ನೇ ಹಸಿರು ಭಾನುವಾರ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಈ ವಿಶೇಷ ಕಾರ್ಯಕ್ರಮದ ಅಂಗವಾಗಿ ಪರಿಸರ ಸ್ವಚ್ಛತಾ ಕಾರ್ಯ ಮತ್ತು ವಿವಿಧ ಪ್ರಕಾರದ ಸಸ್ಯಗಳು ನೆಡುವ ಕಾರ್ಯ ಕೈಗೊಳ್ಳಲಾಯಿತು. ಇದುವರೆಗೆ ನೂರಾರು ಹಸಿರು ಭಾನುವಾರಗಳ ಮೂಲಕ ಪರಿಸರ ಸಂರಕ್ಷಣೆಗೆ ನಿರಂತರ ಪ್ರಯತ್ನ ಮಾಡುತ್ತಿರುವ ಈ ಸಂಸ್ಥೆ, ಮತ್ತೊಮ್ಮೆ ಹಸಿರು ಸಂಸ್ಕೃತಿಯ ಮಹತ್ವವನ್ನು ಪ್ರದರ್ಶಿಸಿತು.

ಪರಿಸರದ ಬಗ್ಗೆ ಜನರಲ್ಲಿನ ಜಾಗೃತಿಯನ್ನು ಹೆಚ್ಚಿಸುವ ಹಾಗೂ ಮುಂದಿನ ಪೀಳಿಗೆಗೆ ಪ್ರೇರಣೆಯಾದಂತಹ ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಕಾಲೇಜು ವಿದ್ಯಾರ್ಥಿಗಳು, ಹಸಿರು ಯೋಧರು, ಸಂಸ್ಥೆಯ ಸಿಬ್ಬಂದಿಗಳು ಮತ್ತು ಪರಿಸರ ಪ್ರೇಮಿಗಳು ಭಾಗವಹಿಸಿದ್ದರು