ವಿಶ್ವ ಪರಿಸರ ದಿನದ ಅಂಗವಾಗಿ ಅದಮ್ಯ ಚೇತನ ಸಂಸ್ಥೆ ಹಾಗೂ ರಾಜ್ಯ ಅರಣ್ಯ ಇಲಾಖೆ ಸಹಯೋಗದಲ್ಲಿ ಅಯೋಧ್ಯೆಯ ಸರಯು ನದಿಯ ತೀರದಲ್ಲಿ 100 ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ ನೀಡಲಾಯಿತು.
ಶ್ರೀ ಅನಂತ್ ಕುಮಾರ್ ಅವರಿಂದ ಪ್ರಾರಂಭಿಸಲಾದ ಸಸ್ಯಾಗ್ರಹ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪರಿಸರ ದಿನದಂದು ಅಯೋಧ್ಯೆಯಲ್ಲಿ ಮರ ನೆಡುವ ಈ ಕಾರ್ಯಕ್ರಮವು ಒಂದು ಪ್ರಮುಖ ಮೈಲಿಗಲ್ಲಾಗಿದೆ.